ಪುತ್ತೂರು ಕಾಂಗ್ರೆಸ್ ಎಸ್.ಟಿ ಘಟಕದ ವಿಶೇಷ ಸಭೆ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ವಿಶೇಷ ಸಭೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಮಾತನಾಡಿ, ಕಳೆದ ನಾಲ್ಕು ವರ್ಷಗಳ ಹಿಂದೆ ನಾವು ಪುತ್ತೂರಲ್ಲಿ ಕಾಂಗ್ರೆಸ್ ಪಕ್ಷದ ಲ್ಲಿ ಎಸ್.ಟಿ ಘಟಕ ರಚನೆ ಮಾಡಿದೆವು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಸ್.ಟಿ ಘಟಕ ಇರಲಿಲ್ಲ. ಹಿಂದೆ ಎಸ್.ಟಿ/ಎಸ್.ಸಿ ಜಂಟಿಯಾಗಿ ಇತ್ತು. ಪುತ್ತೂರು ಘಟಕಕ್ಕೆ ಅಧ್ಯಕ್ಷರನ್ನಾಗಿ ಮಹಾಲಿಂಗ ನಾಯಕತ್ವರನ್ನ ಆರಿಸಿ ಪಕ್ಷ ಸಂಘಟನೆಗೆ ಯೋಗ್ಯ ತರಬೇತಿ ನೀಡಿ ಸ್ವತಂತ್ರವಾಗಿ ಪಕ್ಷ ಸಂಘಟನೆ ಸೂಚಿಸಿದಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕ ಜಿಲ್ಲೆಯಲ್ಲಿ ಮಾದರಿ ಕೆಲಸ ಮಾಡುತ್ತಿರುವುದಕ್ಕೆ ನಮಗೆ ಹೆಮ್ಮೆ ಎನಿಸುತ್ತದೆ ಎಂದ ಅವರು ಪಕ್ಷದಲ್ಲಿ ಮಹಾಲಿಂಗ ನಾಯ್ಕರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ ಎಂದರು.

ದ.ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷರಾದ ತುಕ್ರಪ್ಪ ಕೆಂಬಾರೆಯವರು ಮಾತನಾಡಿ, ಪರಿಶಿಷ್ಟ ಪಂಗಡದಲ್ಲಿ ಬರುವ ಎಲ್ಲಾ ಸಮುದಾಯವನ್ನು ಒಟ್ಟು ಸೇರಿಸುವ ಉದ್ಧೇಶದಿಂದ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಟ್ಟದ ಎಸ್.ಟಿ ಸಮಾವೇಶವನ್ನು ಹಮ್ಮಿಕೊಳ್ಳುವ ನಿರ್ಧಾರವನ್ನು ಮಾಡಲಾಗಿದೆ‌. ಪರಿಶಿಷ್ಟ ಪಂಗಡಕ್ಜೆ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯದಂತೆ ಭೂಮಿ, ವಿದ್ಯೆ, ಉದ್ಯೋಗ ಹೀಗೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಿದೆ. ಈ ಎಲ್ಲಾ ಯೋಜನೆಗಳನ್ನು ನೀಡಿ ಸಮಾಜದಲ್ಲಿ ಮುಂದೆ ಬರಲು ಸಹಕರಿಸಿದ ಕಾಂಗ್ರೆಸ್ ಪಕ್ಷದ ಜೊತೆ ನಾವುಗಳು ನಿಲ್ಲಬೇಕಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷರಾದ ನಾರಾಯಣ ನಾಯ್ಕರವರು ಮಾತನಾಡಿ, ದ.ಕ ಜಿಲ್ಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಎಸ್.ಟಿ ಘಟಕ ಅತ್ತ್ಯುತ್ತಮವಾಗಿ ಕಾರ್ಯಾಚರಿಸುತ್ತಿದೆ. ಇದಕ್ಕೆ ಕಾರಣ ಮುಖ್ಯವಾಗಿ ಈ ಬ್ಲಾಕಿನ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ ಹಾಗೂ ಅವರ ತಂಡ. ಜೊತೆಗೆ ಎಸ್.ಟಿ ಘಟಕದ ಸಕ್ರಿಯ ಕಾರ್ಯಾಚರಣೆ ಎಂದು ಹೇಳಿ ಮುಂದೆ ಹಮ್ಮಿಕೊಳ್ಳಲಿರುವ ಜಿಲ್ಲಾ ಕಾಂಗ್ರೆಸ್ ಎಸ್.ಟಿ ಸಮಾವೇಶಕ್ಕೆ ಪೂರ್ಣ ಪ್ರಮಾಣದ ಸಹಕಾರ ಕೋರಿದರು.

ಪರಿಶಿಷ್ಟ ಪಂಗಡದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಜನರಿಗೆ ಸರಕಾರಿ ಉದ್ಯೋಗ ಸಿಕ್ಕಿದ್ದು ಸುಮಾರು ಶೇ.70ರಷ್ಟು ಜನರಿಗೆ ವಿದ್ಯಾಭ್ಯಾಸ ಸಿಕ್ಕಿದ್ದು ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಪೂರ್ಣ ಪ್ರಮಾಣದಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಸರಕಾರದಿಂದ ಸಿಗುವ ಸವಲತ್ತು ಆಗಲಿ, ಸರಕಾರಿ ಉದ್ಯೋಗವಾಗಲಿ ಅಥವಾ ಇನ್ನಿತರ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದು ಪೂರ್ಣ ಪ್ರಮಾಣದಲ್ಲಿ ದೊರೆಯಬೇಕಾದರೆ ಪರಿಶಿಷ್ಟ ಪಂಗಡದ ಸಮಾಜ ಸಂಘಟಿತರಾಗಬೇಕು. ಕಾಂಗ್ರೆಸ್ ಪಕ್ಷದ ಸಿದ್ಧಾಂತದಡಿ ಪರಿಶಿಷ್ಟ ಪಂಗಡದ ಎಲ್ಲಾ ಸಮುದಾಯಗಳು ಸಂಘಟಿತರಾಗಿ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಂಡು ಸಂಬಂಧಪಟ್ಟ ಸಚಿವರುಗಳನ್ನು ಸಮಾವೇಶಕ್ಕೆ ಆಹ್ವಾನಿಸಿ ಸಮಗ್ರವಾದ ಮನವಿಯನ್ನು ಸರಕಾರಕ್ಕೆ ಸಲ್ಲಿಸಿ ಪರಿಶಿಷ್ಟ ಪಂಗಡಕ್ಕೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಬೇಕೆಂದು ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಸಂಯೋಜಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ನುಡಿದರು.

ರಾಜ್ಯ ವಕ್ತಾರರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅಮಲ ರಾಮಚಂದ್ರ ಮಾತನಾಡಿ, ಪುತ್ತೂರು ಬ್ಲಾಕ್ ನ ಎಸ್.ಟಿ ಘಟಕ ಕಳೆದ ನಾಲ್ಕು ವರ್ಷಗಳಲ್ಲಿ ಸಮರ್ಥ ಅಧ್ಯಕ್ಷರ ನೇತೃತ್ವದಲ್ಲಿ ಅತ್ತ್ಯುತ್ತಮ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಿದೆ. ಬ್ಲಾಕ್ ಅಧ್ಯಕ್ಷರು ಹಾಗೂ ಶಾಸಕರ ಶಿಫಾರಸ್ಸಿನಂತೆ ವಿವಿಧ ಸಮಿತಿಗಳಲ್ಲಿ ಪರಿಶಿಷ್ಟ ಪಂಗಡದ ಸದಸ್ಯರನ್ನು ನೇಮಿಸಲಾಗಿದೆ. ಹಾಗೆಯೇ ರಾಜ್ಯ ಮಟ್ಟದ ನಿಗಮ ಮಂಡಳಿಗಳಿಗೆ ಪರಿಶಿಷ್ಟ ಪಂಗಡದಿಂದ ಆಯ್ಕೆಯಾಗಲು ಎಸ್.ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕರಿಗೆ ಮೊದಲ ಆದ್ಯತೆ ನೀಡಬಹುದು ಎಂದರು. ಮುಂದೆ ಹಮ್ಮಿಕೊಳ್ಳುವ ಸಮಾವೇಶ ಯಶಸ್ವಿಯಾಗಲೆಂದು ಶುಭ ಕೋರಿದರು.

ಆರ್.ಜಿ.ಪಿ.ಎಸ್ ಇದರ ಜಿಲ್ಲಾ ಸಂಯೋಜಕರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಮಹಾಲಿಂಗ ನಾಯ್ಕ ಪುಣಚ, ಜಿಲ್ಲಾ ಎಸ್.ಟಿ ಘಟಕದ ಉಪಾಧ್ಯಕ್ಷ ಕೇಶವ ನಾಯ್ಕರವರು ಸಂದಭೋಚಿತವಾಗಿ ಮಾತನಾಡಿದರು.

ಎಸ್‌ಟಿ ಘಟಕದ ಪ್ರಧಾನ ಕಾರ್ಯದರ್ಶಿ ವಿಮಲ ದೈತೋಟ, ಪ್ರಮುಖ ನಾಯಕರುಗಳಿಗೆ ಹಾಗೂ ಘಟಕದ ಪದಾಧಿಕಾರಿ ಸದಸ್ಯರುಗಳಿಗೆ ವಂದಿಸಿದರು.

ಪುತ್ತೂರು ಬ್ಲಾಕ್ ಎಸ್.ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ ನಮ್ಮ ಸರಕಾರವಿದ್ದು ಪುತ್ತೂರಲ್ಲಿ ನಮ್ಮ ಶಾಸಕರಿದ್ದಾರೆ. ಪರಿಶಿಷ್ಟ ಪಂಗಡದವರ ಯಾವುದೇ ಕುಂದು ಕೊರತೆಯಿದ್ದಲ್ಲಿ ಸಂಬಂಧಪಟ್ಟ ಶೋಷಿತರನ್ನು ನನ್ನ ಬಳಿ ಕರೆ ತನ್ನಿ ಎಂದು ಶಾಸಕರು ನನ್ನಲ್ಲಿ ಸೂಚಿಸಿರುತ್ತಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಟಗೊಳಿಸುವಲ್ಲಿ ಗ್ರಾಮ, ಗ್ರಾಮಗಳಲ್ಲಿ ಸಂಘಟಿತರಾಗಿ ಪಕ್ಷವನ್ನು ಕಟ್ಟಬೇಕಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here