ತುಂಬೆ ಬಿ ಎ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನೂತನ ಎನ್‌ ಎಸ್‌ ಎಸ್ ಘಟಕ ಉದ್ಘಾಟನೆ

0

ಪುತ್ತೂರು: ತುಂಬೆ ಬಿ ಎ ಕೈಗಾರಿಕಾ ತರಬೇತಿ ಸಂಸ್ಥೆ ಇದರ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ನೂತನ ಘಟಕದ ಉದ್ಘಾಟನಾ ಸಮಾರಂಭವು ಸೆ.24ರಂದು ನಡೆಯಿತು.

ಮಂಗಳೂರು ಪಿಎ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಚಾರ್ಯ ಇಸ್ಮಾಯಿಲ್ ಖಾನ್ ಧ್ವಜಾರೋಹಣವನ್ನು ನೆರವೇರಿಸಿ ಘಟಕದ ಕಾರ್ಯವೈಖರಿಯನ್ನು ಕೊಂಡಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಫಿಲೋಮಿನಾ ಪೆರಿಸಿ ರವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರಕಾರಿ ಮಹಿಳಾ ಐಟಿಐ ಪುತ್ತೂರು ಇದರ ಪ್ರಭಾರ ಪ್ರಾಚಾರ್ಯ ಮತ್ತು ತರಬೇತಿ ಅಧಿಕಾರಿ ರಾಜೀವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ನಂತಹ ಘಟಕಗಳಿಗೆ ಸೇರಿ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ತೋಟಗಾರಿಕೆ ಸಂಬಂಧಪಟ್ಟ ಮಾಹಿತಿಯನ್ನು ನೀಡಲು ಬಯಸುವುದಾಗಿ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿ ಎಸ್ ಭಟ್ ವಿದ್ಯಾರ್ಥಿಗಳ ಶಿಸ್ತು ನಿಯಮವನ್ನು ಕೊಂಡಾಡಿದರು. ಬಿಎ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕ ಬಿ ಎಂ ಅಶ್ರಫ್ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಎ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಸಲಾಂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾಗಿ ದುಡಿದು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಉತ್ತಮ ಪ್ರಜೆಯಾಗಿ ಬಾಳಲು ಸಾಧ್ಯ ಎಂದು ಹೇಳಿದರು. ರಾಷ್ಟ್ರೀಯ ಸೇವಾ ದಿನಾಚರಣೆಯ ಬಗ್ಗೆ ಮತ್ತು ನೂತನ ಘಟಕದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದ ಬಿಎ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ನವೀನ್ ಕುಮಾರ್ ಕೆ ಅತಿಥಿಗಳನ್ನು ಸ್ವಾಗತಿಸಿದರು.

ಕಿರಿಯ ತರಬೇತಿ ಅಧಿಕಾರಿ ರಾಜೇಶ್ ಟಿ ಕಾರ್ಯಕ್ರಮ ನಿರೂಪಿಸಿದರು. ನೂತನ ಘಟಕಕ್ಕೆ ಆಯ್ಕೆಯಾದಂತಹ ನಾಯಕ ಸಫ್ವಾನ್ ಹಾಗೂ ಇತರ ಪದಾಧಿಕಾರಿಗಳನ್ನು program officer ಕಿಶನ್ ಪರಿಚಯಿಸಿ ಅತಿಥಿಗಳನ್ನು ಪರಿಚಯಿಸಿದರು.
ಕಿರಿಯ ತರಬೇತಿ ಅಧಿಕಾರಿ ಹಾಗೂ ಸಹಾಯಕ program officer ಪ್ರಿತೇಶ್ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರ ಭಾಗವಹಿಸಿದ್ದರು. ಸಮೂಹ ಭೋಜನದ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here