Home  ಇತ್ತೀಚಿನ ಸುದ್ದಿಗಳು  ಅತ್ಯುತ್ತಮ ವ್ಯವಹಾರ: ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ – ಆಲಂಕಾರು ಮೂರ್ತೆದಾರರ ಸಹಕಾರ ಸಂಘಕ್ಕೆ ದ.ಕ ಜಿಲ್ಲಾ...  
            
                                        
                            
                                
    
        
        
        
            
            
- ಆಲಂಕಾರು: ಅತ್ಯುತ್ತಮ ವ್ಯವಹಾರಕ್ಕಾಗಿ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ನೀಡಿ ಗೌರವಿಸಲಾಗಿದೆ.
 
- ಕಡಬ ತಾಲೂಕಿನ ಆಲಂಕಾರಿನಲ್ಲಿ ಸ್ವಂತ ಕಟ್ಟಡ ಬೈದಶ್ರೀ ಸಹಕಾರ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘವು 2023-24ನೇ ಸಹಕಾರಿ ವರ್ಷದಲ್ಲಿ 198 ಕೋಟಿ ರೂ.ವ್ಯವಹಾರ ಮಾಡಿ 89.32 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸಾಲ ವಸೂಲಾತಿಯಲ್ಲಿ ಶೇ.97.85 ಸಾಧನೆ ಮತ್ತು ಸದಸ್ಯರಿಗೆ ಶೇ.25 ಡಿವಿಡೆಂಡ್ ಸಹ ವಿತರಿಸಿದೆ. ಆಡಿಟ್ ವರ್ಗೀಕರಣದಲ್ಲಿ ’ಎ’ ಶ್ರೇಣಿಯಲ್ಲಿ ಗುರುತಿಸಿಕೊಂಡಿದೆ. ಸಂಘದ ಸಾಧನೆಯನ್ನು ಪರಿಗಣಿಸಿ ಸೆ.22ರಂದು ಬಿ.ಸಿ.ರೋಡ್ನಲ್ಲಿ ನಡೆದ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲ ದ ವಾರ್ಷಿಕ ಮಹಾಸಭೆಯಲ್ಲಿ ಮಹಾಮಂಡಲದ ಅಧ್ಯಕ್ಷರಾದ ಸಂಜೀವ ಪೂಜಾರಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಸಂಘದ ಪರವಾಗಿ ಸಂಘದ ಅಧ್ಯಕ್ಷರಾದ ಎನ್.ಮುತ್ತಪ್ಪ ಪೂಜಾರಿ ನೈಯ್ಯಲ್ಗ, ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ ಕದ್ರ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಲಿಂಗಪ್ಪ ಪೂಜಾರಿಯವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷರಾದ ರಾಜೇಶ್ ಸುವರ್ಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಶೋರ್ ಕುಮಾರ್, ನಿರ್ದೇಶಕರಾದ ಶಿವಪ್ಪ ಸುವರ್ಣ, ಅಣ್ಣಿ ಯಾನೆ ನೋಣಯ್ಯ, ವಿಶ್ವನಾಥ ಪೂಜಾರಿ ಪಂಜ, ವಿಶ್ವನಾಥ, ಆರ್ ಸಿ ನಾರಾಯಣ, ಪುರುಷ ಎನ್ ಸಾಲಿಯಾನ್, ಪದ್ಮನಾಭ ಕೋಟ್ಯಾನ್, ಹರೀಶ್ ಸುವರ್ಣ, ಗಣೇಶ್ ಪೂಜಾರಿ, ಉಷಾ ಅಂಚನ್ ಮತ್ತು ಶೈಲಜಾ ಉಪಸ್ಥಿತರಿದ್ದರು.
 
         
        
     
     
         
                                 
                         
                        
                                      
          
      
	
	
            
			
 
	error: Content is protected !!