ತಾಲೂಕು ಮಟ್ಟದ ಖೋಖೋ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು:ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಹಿಳಾ ಪದವಿಪೂರ್ವ ಕಾಲೇಜು, ಮುಕ್ರಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ  ಖೋಖೋ ಪಂದ್ಯಾಟವು ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

 ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನೀಶ್‌, ಚಿಂತನ್‌, ಭವಿಷ್‌, ಸೃಜನ್‌, ತರುಣ್‌, ಮಿಥುನ್‌ ಶೆಟ್ಟಿ ಎಸ್.ಎಲ್,‌ ತೇಜಸ್‌ ಪಿ.ಕೆ, ಮನ್ವಿತ್‌, ಗೌತಮ್‌. ವಿ ಅಂಚನ್‌, ಪ್ರೇಕ್ಷಿತ್‌ ಶೆಟ್ಟಿ ಎಮ್‌ ಹಾಗೂ  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಬಿ. ಗುರುಕಿರಣ್‌, ಜಿಷ್ಣು ಪ್ರಕಾಶ್‌ ಎ, ಓಂಕಾರ್‌, ಕುಶಾಲ್‌. ಎನ್  ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here