ಬಡಗನ್ನೂರು: ಪಡುಮಲೆ ಶ್ರೀ ವಿಷ್ಣುಮೂರ್ತಿ ದೇವರು ಕುರ್ಮಾವಾತರ ತಾಳಿದ ಮೂಲಸ್ಥಾನ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ 2 ನೇ ವರ್ಷದ ಶ್ರೀ ಶರನ್ನವರಾತ್ರಿ ಮಹೋತ್ಸವ ಸಂಭ್ರಮ ಅ.3 ರಿಂದ 13 ರ ತನಕ 9 ದಿವಸಗಳ ಕಾಲ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಅಲಂಕಾರ ಪೂಜೆ,ಹಾಗೂ ಭಜನಾ ಸಂಕೀರ್ತನೆ ನಡೆಯಲಿರುವ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ.24 ರಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಿತು.
ಪ್ರಾರಂಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರು ಸನ್ನಿಧಿಯಲ್ಲಿ ಇಟ್ಟು ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಹಾಗೂ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ, ಪ್ರಧಾನ ಕಾರ್ಯದರ್ಶಿ ಗಂಗಾಧರ ಮೇಗಿನಮನೆ, ಕೋಶಾಧಿಕಾರಿ ಶಿವಕುಮಾರ್ ಮೋಡಿಕೆ, ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು, ನವರಾತ್ರಿ ಮಹೋತ್ಸವ ಸಮಿತಿ ಸದಸ್ಯರಾದ ಪದ್ಮನಾಭ ರೈ ಅರೆಪ್ಪಾಡಿ, ಪುಷ್ಪರಾಜ್ ಆಳ್ವ ಗಿರಿಮನೆ, ರಮೇಶ್ ರೈ ಕೊಯಿಲ, ಉದಯ ಕುಮಾರ್ ಶರವು, ಸುಬ್ಬಯ್ಯ ರೈ ಹಲಸಿನಡಿ, ಲೋಕೇಶ್ ರೈ ಮೇಗಿನಮನೆ , ಸುಲೋಚನ ಎಸ್ ನೇರ್ಲಪ್ಪಾಡಿ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.