ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರ ಆಯ್ಕೆಗಾಗಿ ಅ.21ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ಸೆ.26ರಂದು ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣಾಧಿಕಾರಿಯೂ ಆಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಚುನಾವಣಾ ಅಽಸೂಚನೆ ಹೊರಡಿಸಲಿದ್ದಾರೆ. ಉಪಚುನಾವಣೆ ಘೋಷಣೆಯಾದ ಸೆ.19ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ.
ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆ.26ರಿಂದ ಅ.7ರ ಸಂಜೆ 6 ಗಂಟೆಯವರೆಗೆ ಜಿಲ್ಲಾಽಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 1೦೦ ಮೀಟರ್ ಪರಿಧಿಯಲ್ಲಿ ಅಭ್ಯರ್ಥಿಯ ವಾಹನವನ್ನು ಒಳಗೊಂಡಂತೆ ಗರಿಷ್ಠ ಮೂರು ವಾಹನಗಳಿಗೆ ಮಾತ್ರ ಕಚೇರಿಯ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ.ಅಭ್ಯರ್ಥಿ ಒಳಗೊಂಡಂತೆ ಗರಿಷ್ಠ 5 ಜನರಿಗೆ ಮಾತ್ರ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
5 ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು,ಆಯುಧ ಶಸ್ತಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಲಾಗಿದೆ.
ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿಽಯಲ್ಲಿ ಚುನಾವಣೆ ನಡೆಯುವ ಕಾರ್ಯದ ಮೇಲೆ ನಿರತರಾಗಿರುವ ಅಽಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ವಿರೂಪವನ್ನು ಉಂಟು ಮಾಡುವುದಾಗಲಿ ಅಥವಾ ನಾಶಗೊಳಿಸುವುದಾಗಲಿ ಮಾಡುವಂತಿಲ್ಲ.ಈ ಆದೇಶವು ಪೊಲೀಸ್ ಅಽಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಽಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ದ.ಕ.ಸ್ಥಳೀಯ ಪ್ರಾಧಿಕಾರದಿಂದ ವಿಧಾನ ಪರಿಷತ್‌ಗೆ ಸದಸ್ಯರಾಗಿ ಚುನಾಯಿತರಾಗಿದ್ದ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪಽಸಿ ಸಂಸದರಾಗಿ ಚುನಾಯಿತರಾಗಿದ್ದರಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಕೋಟಾ ಶ್ರೀನಿವಾಸ ಪೂಜಾರಿಯವರ ಪರಿಷತ್ ಸದಸ್ಯತ್ವದ ಅವಧಿ 2028ರ ಜನವರಿ 5ರ ತನಕ ಇದ್ದರೂ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಇದೀಗ ಪರಿಷತ್‌ಗೆ ನೂತನ ಸದಸ್ಯನ ಆಯ್ಕೆಗಾಗಿ ಉಪಚುನಾವಣೆ ನಡೆಯುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.