ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್/ಜೆಇಇ/ಸಿಇಟಿ ಪುಸ್ತಕ ಬಿಡುಗಡೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ರವಿ ಇಳಂತಿಲ ಹಾಗೂ ರಾಜೇಶ್ ಪೈ ಪುಸ್ತಕಗಳನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲ ಎಚ್ ಕೆ ಪ್ರಕಾಶ್‌ ಇತ್ತೀಚಿನ ದಿನಗಳಲ್ಲಿ ರಾಷ್ಟೀಯ ಮಟ್ಟದ ಪ್ರವೇಶ ಪರೀಕ್ಷೆಗಳಾದ ನೀಟ್ ಹಾಗೂ ಜೆಇಇ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದು ಇದಕ್ಕಾಗಿ ಉನ್ನತ ಮಟ್ಟದ ಪೂರ್ವತಯಾರಿಅಗತ್ಯ. ಈ ನಿಟ್ಟಿನಲ್ಲಿ ಹೊಸದಾಗಿ ಪರಿಚಯಿಸಿದ ಪುಸ್ತಕಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿವೆ ಎಂದರು. ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ಭೌತಶಾಸ್ತ್ರ ಉಪನ್ಯಾಸಕಿ ಚೇತನಾ ಎ ನಿರೂಪಿಸಿದರು. ಪ್ರಾಂಶುಪಾಲ ಎಚ್‌ ಕೆ ಪ್ರಕಾಶ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here