ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಮಂಗಳೂರು, ಇವರ ಜಂಟಿ ಆಶ್ರಯದಲ್ಲಿ ಸೆ.25ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲ-ಬಾಲಕಿಯರ ಕರಾಟೆ ಪಂದ್ಯಾಟ- 2024 ಸ್ಪರ್ಧೆಯಲ್ಲಿ ಪ್ರೌಢ ಶಾಲಾ ಬಾಲಕಿಯರ 40 ರಿಂದ 44 ಕೆ.ಜಿ ವಿಭಾಗದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ 9ನೇ ತರಗತಿಯ ಕುಮಾರಿ ಖುಷಿ ಕೆ.ಎಂ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈಕೆ ಬೆಳ್ಳಿಪ್ಪಾಡಿ ನಿವಾಸಿ ಕೆ.ವಿ ಮಂಜುನಾಥ್ ಹಾಗೂ ಭವ್ಯ ದಂಪತಿ ಪುತ್ರಿ. ಇಂಪ್ಯಾಕ್ಟ್ ಆರ್ಟ್ ಆಂಡ್ ಸ್ಪೋರ್ಟ್ಸ್ ಕರಾಟೆ ಕ್ಲಬ್ ನ ಮುಖ್ಯಸ್ಥರಾದ ಸೆನ್ಸಾಯಿ ಟಿ.ಡಿ ಥೋಮಸ್ ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.