ಪುತ್ತೂರು : ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ಸೆ.2ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಯಶಸ್ವಿ ಹಿನ್ನೆಲೆಯಲ್ಲಿ ಕೃತಜ್ಞತಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಪ್ರೌಢಶಾಲಾ ಕಾರ್ಯಾಧ್ಯಕ್ಷ ಸೈಯ್ಯದ್ ಗಫೂರ್ ಸಾಹೇಬ್ ಪಾಲ್ತಾಡು ವಹಿಸಿದ್ದರು. ವೇದಿಕೆಯಲ್ಲಿ ಪಂದ್ಯಾಟದ ಅಧ್ಯಕ್ಷ ವೆಂಕಪ್ಪ ಗೌಡ ನಾರ್ಕೋಡ್ ಪೆರ್ಜಿ, ಸುನೀಲ್ ರೈ ಪಾಲ್ತಾಡು, ಶಾಬು ಸಾಹೇಬ್ ಪಾಲ್ತಾಡು , ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಳಿನಿ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ಇವರು ನಿರೂಪಿಸಿ ಲೆಕ್ಕ ಪತ್ರವನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ ಪಂದ್ಯಾಟಕ್ಕೆ ಸಹಕರಿಸಿದ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಸ್‌ವೆಂಕಟರಮಣ ಗೌಡ ಅವರನ್ನು ಗೌರವಿಸಲಾಯಿತು.
ಪಂದ್ಯಾಟದ ಗೌರವಾಧ್ಯಕ್ಷ ,ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ ಎಸ್, ಗ್ರಾ.ಪಂ.ಸದಸ್ಯೆ ಶುಭಲತಾ ಜೆ ರೈ, ಹಿರಿಯ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.