ಪುತ್ತೂರು: ಸರಕಾರದ ನಿರ್ದೇಶನದಂತೆ ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕುಂಬ್ರ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೆ.28 ರಂದು ನಡೆಯಿತು.
ಕುಂಬ್ರ ಪೇಟೆ, ಬಸ್ಸು ನಿಲ್ದಾಣಗಳ ಸುತ್ತಮುತ್ತ ಸ್ವಚ್ಛತೆಯನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ಒಣಕಸ ಮತ್ತು ಹಸಿ ಕಸವನ್ನು ಪಂಚಾಯತ್ನ ಸ್ವಚ್ಚವಾಹಿನಿ ವಾಹನಕ್ಕೆ ನೀಡುವಂತೆ ಈ ಸಂದರ್ಭದಲ್ಲಿ ತಿಳಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಸ್ಎಸ್ಎಫ್ ಮತ್ತು ಎಸ್ವೈಎಸ್ ಇಸಾಬ ಸಂಘಟನೆ ಕುಂಬ್ರ ಸೆಕ್ಟರ್, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಧರ್ಮಸ್ಥಳ ಒಕ್ಕೂಟ, ರಿಕ್ಷಾ ಚಾಲಕ ಮಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದವರು, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ, ಮಾಜಿ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ, ಕುಂಬ್ರ ಶ್ರೀ ರಾಮ ಭಜನಾ ಮಂದಿರದ ಮಾಜಿ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಉಷಾ ನಾರಾಯಣ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.