





ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ಅವರು ಮಾತನಾಡಿ, ದ್ವಿತೀಯ ಪಿಯುಸಿ ಎಂಬುದು ಶಿಕ್ಷಣದ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಘಟ್ಟ. ಒಬ್ಬ ವಿದ್ಯಾರ್ಥಿಯು ಉತ್ತಮ ಭವಿಷ್ಯವನ್ನು ನಿರ್ಧಾರ ಮಾಡಬೇಕಿದ್ದರೆ ಪಿಯುಸಿ ಶಿಕ್ಷಣವು ಬಹಳ ಮುಖ್ಯವಾಗುತ್ತದೆ. ವಿದ್ಯಾರ್ಥಿಯು ಯಾವುದೇ ನಿರ್ಲಕ್ಷ್ಯವನ್ನು ಮಾಡದೆ, ಪರೀಕ್ಷೆಗಳಿಗೆ ನಿರಂತರವಾಗಿ ತಯಾರಾಗುತ್ತಾ, ಉತ್ತಮ ಅಂಕವನ್ನು ಗಳಿಸುವುದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.






ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ.ಅವರು ವಿದ್ಯಾರ್ಥಿಗಳ ಕಲಿಕೆಯಲ್ಲಿ ಪೋಷಕರ ಪಾತ್ರ ಏನು ಎಂಬುದರ ಕುರಿತಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕ ಗುಡ್ಡಪ್ಪ ಬಲ್ಯರವರು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಚೇತನ್ ಎಂ.ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.










