ಕಡಬ ತಾ| ಪ.ಪೂ.ಕಾಲೇಜು ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ-ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿಗೆ ದ್ವಿತೀಯ ಸ್ಥಾನ

0

ರಾಮಕುಂಜ: ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ಬೆಸ್ಟ್ ಡಿಫೆಂಡರ್ ಆಗಿ ಮೊಹಮ್ಮದ್ ಅಜೀಮ್ ಆಯ್ಕೆಯಾಗಿದ್ದಾರೆ. ಅಲ್ಲದೇ ತಂಡದ ಆಟಗಾರರಾದ ಅಬೂಬಕ್ಕರ್ ಸಿದ್ದೀಕ್ (ದ್ವಿತೀಯ ಪಿಯುಸಿ), ಮಹಮ್ಮದ್ ಅಜೀಮ್(ಪ್ರಥಮ ಪಿಯುಸಿ) ಮತ್ತು ಉದಿತ್ ರವಿ(ಪ್ರಥಮ ಪಿಯುಸಿ)ರವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಟಗಾರರನ್ನು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಣೇಶ್ ಕೆ.ರವರನ್ನು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ., ಹಾಗೂ ಉಪನ್ಯಾಸಕರು ಅಭಿನಂದಿಸಿದರು.

LEAVE A REPLY

Please enter your comment!
Please enter your name here