ಪ್ರಗತಿ ಸ್ಟಡಿ ಸೆಂಟರ್‌ರವರಿಂದ ಪ್ರಗತಿ ವಿಜ್ಞಾನ್ CET/NEET 2024-25 ಪುಸ್ತಕ ಬಿಡುಗಡೆ

0

ಪುತ್ತೂರು: ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದ ಶೈಕ್ಷಣಿಕ ವಿದ್ಯಾರ್ಥಿಗಳಿಗೆ CET/NEET ವಾರಾಂತ್ಯದ ತರಗತಿಗಳು ಸೆ.15ರಂದು ಪ್ರಾರಂಭಗೊಂಡಿದೆ.

ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ವತಿಯಿಂದ CET/NEET ಪರೀಕ್ಷೆಯನ್ನು ಸುಲಭವಾಗಿ ಎದುರಿಸುವ ಸಲುವಾಗಿ ಪ್ರಗತಿ ವಿಜ್ಞಾನ್ ಎಂಬ ವಿನೂತನ ಪುಸ್ತಕವನ್ನು ಸೆ.29ರಂದು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಪ್ರಗತಿ ವಿಜ್ಞಾನ್ ಪುಸ್ತಕದ ಉದ್ಘಾಟನೆಯನ್ನು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಎಂ. ನೆರವೇರಿಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಸರಕಾರಿ ಪ.ಪೂ. ಕಾಲೇಜಿನ ಗಣಿತ ಉಪನ್ಯಾಸಕಿ ಮಂಜುಳಾ, ವಿವೇಕಾನಂದ ಪ.ಪೂ. ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಮುರಳಿ, ಭೌತಶಾಸ್ತ್ರ ಉಪನ್ಯಾಸಕ ಸುಧೀರ್, ಪ್ರಗತಿ ಸ್ಟಡಿ ಸೆಂಟರ್‌ನ ಪ್ರಾಂಶುಪಾಲೆ ಕೆ. ಹೇಮಲತಾ ಉಪಸ್ಥಿತರಿದ್ದರು. ಪ್ರಗತಿ ಸ್ಟಡಿ ಸೆಂಟರ್‌ನ ಸಂಚಾಲಕ ಗೋಕುಲ್‌ನಾಥ್ ಪಿ.ವಿ. ವಂದಿಸಿದರು.

LEAVE A REPLY

Please enter your comment!
Please enter your name here