





ಕಾಣಿಯೂರು: ಸುಳ್ಯ ಬಿಜೆಪಿ ಮಂಡಲ ಸಮಿತಿಯ ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ದೋಳ್ಪಾಡಿ ಮತ್ತು ಚಾರ್ವಾಕ ಶಕ್ತಿ ಕೇಂದ್ರದ ಸಭೆಯು ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಪ್ರಭಾರಿ ಹರೀಶ್ ಕಂಜಿಪಿಲಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿ. ಪಂ.ಮಾಜಿ ಸದಸ್ಯೆ ಆಶಾ ತಿಮ್ಮಪ್ಪ, ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಉದನಡ್ಕ, ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್, ಮಂಡಲ ಸಮಿತಿಯ ಸದಸ್ಯರಾದ ಧನಂಜಯ ಕೇನಾಜೆ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಧರ್ಮೇಂದ್ರ ಗೌಡ ಕಟ್ಟತ್ತಾರು ಹಾಗೂ ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.











