ಅಡ್ಡಹೊಳೆ: ಕೆಎಸ್‌ಆರ್‌ಟಿಸಿ ಬಸ್ಸುಗಳ ಡಿಕ್ಕಿ-ದಂಪತಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ದಂಪತಿ ಗಾಯಗೊಂಡ ಘಟನೆ ಅ.1ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ನಡೆದಿದೆ.


ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿ ಸಿ ಬಸ್ಸು ನಡುವೆ ಅಡ್ಡಹೊಳೆ ಪೆಟ್ರೋಲ್ ಬಂಕ್‌ನ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡು ವಾಹನಗಳೂ ಜಖಂಗೊಂಡಿವೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಹಾಸನ ಮೂಲದ ದಂಪತಿ ನಾಗೇಂದ್ರ ಪ್ರಸಾದ್(60) ಹಾಗೂ ಭಾರತಿ(54) ಎಂಬವರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಶಿರಾಡಿಯ 108 ಆಂಬುಲೆನ್ಸ್‌ನಲ್ಲಿ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.


ಸ್ಥಳೀಯರ ಆಕ್ರೋಶ:
ಕಳೆದ ಎರಡು ವಾರಗಳ ಅವಧಿಯಲ್ಲಿ ಗುಂಡ್ಯ ಪರಿಸರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ನಡೆಯುತ್ತಿರುವ 3ನೇ ಅಪಘಾತ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುವುದು ಇದಕ್ಕೆ ಚಾಲಕರ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಕಾರಣವಾಗುತ್ತಿದೆ ಎಂದು ಆರೋಪಿಸಿ ಘಟನಾ ಸ್ಥಳದಲ್ಲಿ ಚಾಲಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here