ಉಪ್ಪಿನಂಗಡಿ: ಬಸ್ಸಿನಡಿಗೆ ಬಿದ್ದ ಬೈಕ್- ಸವಾರ ಗಂಭೀರ

0

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರ ಹರಿದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅ.1ರಂದು 34 ನೆಕ್ಕಿಲಾಡಿಯ ಅಂಬೆಲದ ಬಳಿ ನಡೆದಿದೆ.


ವಿನೋದರ (57) ಎಂಬವರು ಗಾಯಗೊಂಡ ಬೈಕ್ ಸವಾರ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ತಾಗಿದ್ದು, ಆಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‌ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಪುತ್ತೂರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here