ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಸದಸ್ಯ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಿದರು.


ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಶಾಲಾ ಸಂಚಾಲಕ ವಂದನೀಯ ಫಾದರ್ ಲಾರೆನ್ಸ್ ಮಸ್ಕರೇನ್ಹಸ್ ಹಾಗೂ ಶಿಕ್ಷಕ ರಕ್ಷಕ ಸಮಿತಿಯ ಉಪಾಧ್ಯಕ್ಷ ಮೌರಿಸ್ ಕುಟಿನ್ಹ ,ಸಮಿತಿಯ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿನಿ ಮಾನ್ವಿ ಭಂಡಾರಿ ಇವರು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.


ಶಾಲಾ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮವನ್ನು ನೀಡಲಾಯಿತು. 2024-25ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ವತಿಯಿಂದಲೂ ಶಾಲಾ ಶಿಕ್ಷಕರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಹಾಗೂ ಶಿಕ್ಷಕರಿಗಾಗಿ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.ಶಾಲಾ ಸಂಚಾಲಕರು ಶಿಕ್ಷಕ ವೃಂದಕ್ಕೆ ಕಿರು ಕಾಣಿಕೆಗಳನ್ನು ನೀಡಿ ಗೌರವಿಸಿದರು.

ಮೊಹಮ್ಮದ್ ರಿಯಾನ್ ಸ್ವಾಗತಿಸಿದರು.ಸಹಶಿಕ್ಷಕಿ ಗೀತಾ ಲೋಬೋ ಇವರು ವಂದಿಸಿದರು.ಶಾಲಾ ನಾಯಕ ಸಾಕ್ಷಾತ್ ಬಿ ಶೆಟ್ಟಿ ಮತ್ತು ಉಪನಾಯಕಿ ದಿಯಾ ಜಿ.ನಿರೂಪಿಸಿದರು.

LEAVE A REPLY

Please enter your comment!
Please enter your name here