ಸಂತವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ

0

ಪುತ್ತೂರು: ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆಯನ್ನು ಅ.2ರಂದು ಆಚರಿಸಲಾಯಿತು.

ದೀಪ ಬೆಳಗಿಸಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆಯ್ಯಲಾಯಿತು.

ಶಾಲಾ ವಿದ್ಯಾರ್ಥಿ ಖತೀಜ ರಿಂಷಾ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಮಹತ್ವವನ್ನು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಗಾಂಧೀಜಿಯ ಆದರ್ಶಗಳನ್ನು ಯಾವ ರೀತಿ ಪಾಲನೆ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲಾ ಗೈಡ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ದಿಯಾ ಜಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿನಿ ಕೃತಿ ವಂದನಾರ್ಪಣೆಗೈದರು. ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here