ಕೊಂಡಾಡಿಕೊಪ್ಪ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

0

ಕಾಣಿಯೂರು: ಕೊಂಡಾಡಿಕೊಪ್ಪ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿ ಕೊಪ್ಪದಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಮತ್ತು ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಲತಾ ಶರವೂರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಗುರು ಜಯಂತ್ ವೈ ಮಹಾನ್ ನಾಯಕರ ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಹರೀಶ್ ಏಂತಡ್ಕ, ರತ್ನಾವತಿ ಕೊಂಡಾಡಿಕೊಪ್ಪ, ಚಿತ್ರಾ ನಾಡ್ತಿಲ, ಪ್ರೇಮಾವತಿ ಕೊಂಡಾಡಿಕೊಪ್ಪ, ಮೋಹಿನಿ, ನೋಣಯ್ಯ ಗೌಡ ಏಂತಡ್ಕ, ಗೀತಾ ಕೊಂಡಾಡಿ , ಶಾಲಾ ನಾಯಕ ರಕ್ಷಣ್ ಉಪಸ್ಥಿತರಿದ್ದರು. ಸಹಶಿಕ್ಷಕಿ ಸೌಮ್ಯ ಸ್ವಾಗತಿಸಿ, ಸಹಶಿಕ್ಷಕಿ ದಿವ್ಯಾ ವಿ ವಂದಿಸಿದರು.ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here