ನಾಣಿಲ ಶಾಲೆಯಲ್ಲಿ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ ಆಚರಣೆ – ಸ್ಕೌಟ್, ಗೈಡ್ ಉದ್ಘಾಟನೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಜಯಂತಿ ಮತ್ತು ಸ್ಕೌಟ್ ಮತ್ತು ಗೈಡ್ ನ ಉದ್ಘಾಟನಾ ಕಾರ್ಯಕ್ರಮವು ಅ 2ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸ್ಕೌಟ್ ಮತ್ತು ಗೈಡ್ ನ ಉದ್ಘಾಟನೆಯನ್ನು ಕಾಣಿಯೂರು ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಶ್ರೀ ಅವರು ನೆರವೇರಿಸಿ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ಸ್ ನ ಅನುಕೂಲತೆಯ ಬಗ್ಗೆ ಮಾಹಿತಿ ನೀಡಿದರು. ಸಭಾಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿಯವರು ವಹಿಸಿ ಮಾತನಾಡಿ, ಸ್ಕೌಟ್ ಮತ್ತು ಗೈಡ್ಸ್ ನ ಶಿಬಿರಾರ್ಥಿಗಳ ಕರ್ತವ್ಯದ ಬಗ್ಗೆ ಶುಭ ಹಾರೈಸಿದರು.

ಶಾಲಾ ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿ ಸ್ಕೌಟ್ ಗೈಡ್ಸ್ ತರಬೇತಿದಾರರಾದ ಸಹಶಿಕ್ಷಕರಾದ ಸುನಿಲ್ ಮತ್ತು ನಂದಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಿಕ್ಷಕ ವೃಂದ, ಮಕ್ಕಳು ಭಾಗವಹಿಸಿದರು. ಸಹ ಶಿಕ್ಷಕಿ ಮೋಹಿನಿ ವಂದಿಸಿದರು.

LEAVE A REPLY

Please enter your comment!
Please enter your name here