ಪುತ್ತೂರು ಶಾರದೋತ್ಸವ: ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ, ಪುತ್ತೂರು ಶಾರದೋತ್ಸವದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ಅ.2ರಂದು ಸಂಜೆ ನಡೆಯಿತು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯರವರು ಮೆರವಣಿಗೆಗೆ ಚಾಲನೆ ನೀಡಿ ಶುಭಹಾರೈಸಿದರು.

ಮೆರವಣಿಗೆಯಲ್ಲಿ ಚಂಡೆ ಮೇಳ, ವಾದ್ಯಘೋಷ, ವೇದ ಘೋಷ, ವಾದ್ಯವೃಂದ ಆಕರ್ಷಣೆಯಾಗಿತ್ತು. ಮೆರವಣಿಗೆಯು ದರ್ಬೆ ವೃತ್ತದಿಂದ ಮುಖ್ಯರಸ್ತೆಯಿಂದಾಗಿ ಶ್ರೀ ಶಾರದಾ ಭಜನಾ ಮಂದಿರಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು.

ಮೆರವಣಿಗೆಗೆ ಬರಲು ಸಾಧ್ಯವಾಗದ ಭಕ್ತಾದಿಗಳು ಭಜನಾ ಮಂದಿರಕ್ಕೆ ಹೊರೆಕಾಣಿಕೆ ಸಮರ್ಪಣೆ ಮಾಡಿದ್ದರು. ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಹೊರೆಕಾಣಿಕೆ ಸಮಿತಿ ಸಂಚಾಲಕ ರಾಜೇಶ್ ಬನ್ನೂರು, ಕೋಶಾಧಿಕಾರಿ ತಾರನಾಥ್ ಎಚ್., ಜತೆ ಕಾರ್ಯದರ್ಶಿಗಳಾದ ಸುಧೀರ್ ಕಲ್ಲಾರೆ, ಜಲಜಾಕ್ಷಿ ಎನ್. ಹೆಗ್ಡೆ, ಉಪಾಧ್ಯಕ್ಷರುಗಳಾದ ಯಶವಂತ ಆಚಾರ್ಯ, ದಯಾನಂದ (ಆದರ್ಶ), ಶೋಭಾಯಾತ್ರೆ ಸಂಚಾಲಕ ನವೀನ್ ಕುಲಾಲ್, ಮಾಜಿ ಶಾಸಕ ಸಂಜೀವ ಮಠಂದೂರು, ಮುರಳೀಕೃಷ್ಣ ಹಸಂತ್ತಡ್ಕ, ಸುರೇಶ್ ಪುತ್ತೂರಾಯ, ಬೂಡಿಯಾರ್ ರಾಧಾಕೃಷ್ಣ ರೈ, ಹರಿಣಿ ಪುತ್ತೂರಾಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here