ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಎಸ್ ಪೂಜಾರಿಯವರಿಗೆ ಟಿಕೆಟ್ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನ ಕಾಂಗ್ರೆಸ್ ನಾಯಕರಾಗಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಸಹಕಾರಿ ಧುರೀಣ, ಸಮಾಜ ಸೇವಕ, ರಾಜಕೀಯ, ಸಹಕಾರಿ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಬಿಕಾಂ ಪದವೀಧರರಾಗಿರುವ ಇವರು ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಜು ಪೂಜಾರಿಯವರು ಮಾಜಿ ಶಾಸಕ ಗೋಪಾಲ ಪೂಜಾರಿಯವರ ನಿಕಟವರ್ತಿಯಾಗಿ ಗುರುತಿಸಿಕೊಂಡವರು. ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿರುವ ರಾಜು ಪೂಜಾರಿ ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕರಾಗಿದ್ದು ಬಡಾಕೆರೆ ಸೇವಾ ಸಹಕಾರಿ ಸಂಘ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.