ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲಿ ಇಂದಿನಿಂದ ನವರಾತ್ರಿ ಉತ್ಸವ

0

ಕಡಬ: ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.3 ರಿಂದ ಪ್ರಾರಂಭಗೊಂಡು ಅ.13ರವರೆಗೆ ನಡೆಯಲಿದೆ.


ಪೂರ್ವಾಹ್ನ ದೇವಸ್ಥಾನದಲ್ಲಿ ತೆನೆ ಕಟ್ಟುವ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.
ಅ.13 ವಿಜಯದಶಮಿಯಂದು ಶ್ರೀ ಮಹಾಗಣಪತಿ ಹೋಮ, ಶ್ರೀ ದೇವಿಗೆ ಪಂಚಾಮೃತ ಅಭಿಷೇಕ, ನವಕ ಕಲಾಭಿಷೇಕ, ಮಹಾಪೂಜೆ, ನವಾನ್ನ ಭೋಜನ, ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದ್ದು, ಅ.12ರಂದು ಆಯುಧ ಪೂಜಾ ಪ್ರಯುಕ್ತ ವಾಹನಗಳಿಗೆ ಆಯುಧಾ ಪೂಜಾ ಕಾರ್ಯಕ್ರಮವು ನಡೆಯಲಿದೆ, ಅ.13ರಂದು ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಅನ್ನಪ್ರಾಸನ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಮಹಾಪೂಜೆ, ರಂಗಫೂಜೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

LEAVE A REPLY

Please enter your comment!
Please enter your name here