ಪುತ್ತೂರು: ಉಬಾರ್ ಚೆಸ್ ಅಕಾಡೆಮಿ ಪುತ್ತೂರು ಇದರ ವತಿಯಿಂದ ಮಾಯಿದೆ ದೇವುಸ್ ಸಮೂಹ ಸಂಸ್ಥೆಗಳು ಮತ್ತು ದಕ್ಷಿಣ ಕನ್ನಡ ಚೆಸ್ ಅಕಾಡಮಿ ಇದರ ಸಹಭಾ ಗಿತ್ವದಲ್ಲಿ ಅಂತರ ಜಿಲ್ಲಾ ರ್‍ಯಾಪಿಡ್ ಚೆಸ್ ಟೂರ್ನ್‌ಮೆಂಟ್ ಉಬಾರ್ ಚೆಸ್ ಟ್ರೋಫಿ 2024 ಪುತ್ತೂರು ಬಸ್ಟೆಂಡ್ ಮುಂಭಾಗದಲ್ಲಿರುವ ಮಾಯಿದೆ ದೇವುಸ್ ಚರ್ಚ್ ಹಾಲ್‌ನಲ್ಲಿ ಅ.4ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಮಾಯಿದೆ ದೇವುಸ್ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೇನಸ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇದರ ಪ್ರಾಂಶುಪಾಲರಾದ ರಾಜೇಶ್ ಪಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಹಾಗೂ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರೋಪ ಸಮಾರಂಭ: ಸಂಜೆ 5.೦೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ಗೌರವಾಧ್ಯಕ್ಷತೆ ವಹಿಸಲಿದ್ದಾರೆ. ಚರ್ಚ್ ಪಾಲನಾ ಸಮಿತಿಯ ಸಹಾಯಕರಾದ ರೆ. ಫಾ.. ಲೋಹಿತ್ ಅಜಯ್ ಮಸ್ಕರೇನಸ್ ಮುಖ್ಯ ಅತಿಥಿಯಾಗಿದ್ದಾರೆ. ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಹಾಗೂ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ. ಮುಕ್ತ ವಿಭಾಗ, ಉಬಾರ್ ಚೆಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ, ಇತರ ಶಾಲಾ ವಿದ್ಯಾರ್ಥಿಗಳಿಗೆ 8 ರಿಂದ 16 ವರ್ಷದೊಳಗಿನ ವಿಭಾಗದಲ್ಲಿ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ವಿವಿದ ವಿಭಾಗಗಳಲ್ಲಿ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಉಬಾರ್ ಚೆಸ್ ಅಕಾಡೆಮಿಯ ನಿರ್ದೇಶಕರಾದ ಜಗನ್ನಾಥ ಅಡಪ ತಿಳಿಸಿದ್ದಾರೆ.