ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಖೋ-ಖೋ ಪಂದ್ಯಾಟ – ರಾಮಕುಂಜ ಆ.ಮಾ.ಶಾಲಾ ತಂಡ ದ್ವಿತೀಯ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಉ.ಹಿ.ಪ್ರಾ.ಶಾಲೆ ಹಳೆನೇರೆಂಕಿ ಇದರ ಜಂಟಿ ಆಶ್ರಯದಲ್ಲಿ ಹಳೆನೇರೆಂಕಿ ಶಾಲೆಯಲ್ಲಿ ನಡೆದ ಪುತ್ತೂರು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.


ಶಾಲೆಯ 6ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ಆರ್.ಗೌಡ ಉತ್ತಮ ಓಟಗಾರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯ ಪಿ.ಎನ್ ತರಬೇತಿ ನೀಡಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here