ರಾಮಕುಂಜ ಆ.ಮಾ.ಶಾಲೆಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಶ್ರೇಷ್ಠ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನೋತ್ಸವವನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ ಇದರ ಅಧ್ಯಕ್ಷರೂ ಆದ ಸೇಸಪ್ಪ ರೈಯವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು, ವಿದ್ಯಾರ್ಥಿಗಳೆಲ್ಲರು ಆದರ್ಶ ಪುರುಷ ಗಾಂಧೀಜಿಯವರ ಗುಣಗಳನ್ನು ಪಾಲನೆ ಮಾಡಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಮರಣೀಯ ಕ್ಷಣಗಳನ್ನು ಶಿಕ್ಷಕರು, ವಿದ್ಯಾರ್ಥಿಗಳು ನೆನಪಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ, ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಆಂದೋಲನ ನಡೆಯಿತು. ಕಿಶೋರ್ ಕುಮಾರ್ ಬಿ.,ಸ್ವಾಗತಿಸಿ, ಸಹಶಿಕ್ಷಕ ಹರೀಶ್ ವಂದಿಸಿದರು. ಸಿಹಿತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here