ಪುತ್ತೂರು: ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತೆಯ ಬಳಿಕ ಸಭಾ ಕಾರ್ಯಕ್ರಮ ನಡೆಯಿತು.
ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್ ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ ಗುಣಗಳು ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಧೀಮಂತ ನಾಯಕತ್ವದ ಬಗ್ಗೆ ತಿಳಿಸಿದರು. ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿ ಯವರ ಬದುಕಿನ ಮಾಹಿತಿ ತಿಳಿಸಿದರು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದರು. ನಿರ್ದೇಶಕ ಸೀತಾರಾಮ ಪೂಜಾರಿ ಗೌರವ ಉಪಸ್ಥಿತಿಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಗೌಡ ಮಲುವೇಳು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸೌಮ್ಯಶ್ರೀ ಹೆಗಡೆ, ಸಂಚಾಲಕ ಎ ವಿ ನಾರಾಯಣ ಇವರೆಲ್ಲರೂ ಸಾಂದರ್ಭಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಗನ್ವಿತ್, ಅದ್ವಿಕ್ ಬಂಜನ್, ವಿಕ್ಯಾತ್, ಅನಿಕಾ ರವರು ಗಾಂಧೀಜಿ ಹಾಗೂ ಶಾಸ್ತ್ರೀಜಿ ಯವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಪುಷ್ಪಾವತಿ ಕಳುವಾಜೆ, ಪ್ರತಿಭಾ ದೇವಿ, ವನಿತಾ ಎ.ವಿ, ಶಿಕ್ಷಕ ವೃಂದ, ಬೋಧಕೇತರ ವೃಂದ, ಪೋಷಕ ವೃಂದ, ವಿದ್ಯಾರ್ಥಿ ವೃಂದದವರು ಪಾಲ್ಗೊಂಡಿದ್ದರು.
ಪ್ರಾಂಶುಪಾಲೆ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಹರ್ಷಿತ ಪ್ರಾರ್ಥಿಸಿದರು. ಶಿಕ್ಷಕಿ ರೀಮಾಲೋಬೋ ಸಂವಿಧಾನದ ಪೂರ್ವ ಪೀಠಿಕೆ ವಾಚಿಸಿದರು. ಶಿಕ್ಷಕಿ ಪ್ರಕ್ಷುತ ವಂದಿಸಿದರು. ಶಿಕ್ಷಕಿಯರಾದ ಶ್ರೇಯ ಹಾಗೂ ರಂಜಿತಾ ಕಾರ್ಯಕ್ರಮ ನಿರೂಪಿಸಿದರು.