ಉಪ್ಪಿನಂಗಡಿ: ಅ 2; ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಮತ್ತು ದೇಶದ ಎರಡನೇ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಮಾಡುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸ್ವಾಗತಿಸಿದ ಶಾಲಾ ಮುಖ್ಯಗುರುಗಳಾದ ಜಯಶ್ರೀ ಎಮ್ ರವರು ಮಾತನಾಡಿ, ದೇಶಕ್ಕಾಗಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಕೊಡುಗೆ ಮತ್ತು ಸಮರ್ಪಣೆಯ ಬಗ್ಗೆ ವಿವರಿಸಿದರು. ಕೆಮ್ಮಾರ ಶಾಲೆಯ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಮಹಾತ್ಮರ ಕೊಂಡಾಡುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲಾ ಶಿಕ್ಷಕಿ ಸಂಧ್ಯಾರವರು ಮಹಾತ್ಮ ಗಾಂಧೀಜಿ ಮತ್ತು ಶಾಸ್ತ್ರಿಯವರ ಬಗ್ಗೆ ಪ್ರಶ್ನೊತ್ತರಗಳ ಪಾಠ ಮಾಡುವ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಕೆಮ್ಮಾರ ಶಾಲಾಭಿವೃಧ್ದಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ, ಯೋಗಿತಾ, ವನಿತಾ, ಸೌಮ್ಯ, ಕವಿ, ಬರಹಗಾರ ಅಬ್ದುಲ್ ಗಫ್ಫಾರ್ ಕೆಮ್ಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೆಂಕಟರಮಣ ಭಟ್ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ಧನ್ಯವಾದಗೈದರು. ಶಿಕ್ಷಕಿಯರಾದ ಲೀನಾ ಲೆಸ್ರಾಡೋ, ಮೆಹನಾಝ್ ಸಹಕರಿಸಿದರು.