ನಿಡ್ಪಳ್ಳಿ ದೇವಾಲಯದಲ್ಲಿ ನವರಾತ್ರಿ ಉತ್ಸವ -ವಿವಿಧ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ನವರಾತ್ರಿ ಉತ್ಸವ ಅ.3ರಿಂದ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದ್ದು ಅ.3ರಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.


ಬೆಳಿಗ್ಗೆ ಶ್ರೀ ಮಹಾಗಣಪತಿ ಹವನ ನಂತರ ಶ್ರೀ ದೇವರಿಗೆ ಪಂಚವಿಂಶತಿ ಕಲಶ ನಡೆಯಿತು.ಪ್ರಗತಿಪರ ಕೃಷಿಕ ರಾಮಕೃಷ್ಣ ಭಟ್ ದೇವಮಣಿ ದೀಪ ಬೆಳಗಿಸಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.ನಂತರ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಮಂದಾರಗಿರಿ ನಿಡ್ಪಳ್ಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಕಾರ್ಯಕ್ರಮ: ರಾತ್ರಿ ಗಂಟೆ 7ರಿಂದ ಮಹಾಪೂಜೆ ಶ್ರೀ ದೇವರಿಗೆ ಸಾಮೂಹಿಕ ವಿಶೇಷ ರಂಗಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here