ಮೊಟ್ಟೆತ್ತಡ್ಕ ಮಿಶನ್‌ಮೂಲೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುತ್ತಿರುವ ಸಾರ್ವಜನಿಕ ನವರಾತ್ರಿ ಉತ್ಸವ ಆರಂಭವಾಗಿದ್ದು, ಅ.3ರಂದು ಚಾಲನೆ ನೀಡಲಾಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ದಿ.ಕೆ.ಮೋಹನ್ ರೈ ಮಿಶನ್‌ಮೂಲೆರವರ ಪುತ್ರ ರಮೇಶ್ ರೈ ಮಿಶನ್‌ಮೂಲೆರವರು ಭಗವಾಧ್ವಜಾರೋಹಣವನ್ನು ನೆರವೇರಿಸಿ ಉತ್ಸವಕ್ಕೆ ಚಾಲನೆಯಿತ್ತರು. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಉದಯನಾರಾಯಣ ಕಲ್ಲೂರಾಯ ಸಂಪ್ಯರವರ ನೇತೃತ್ವದಲ್ಲಿ ಸಹಾಯಕ ಅರ್ಚಕ ರಮೇಶ್ ಅಯ್ಯರ್ ಮುಕ್ರಂಪಾಡಿರವರ ಸಹಕಾರದಲ್ಲಿ ಮಹಾಗಣಪತಿ ಹೋಮ ನಡೆಯಿತು.


ಶ್ರೀ ಕ್ಷೇತ್ರವು ವಿದ್ಯುದೀಪಲಂಕಾರದಿಂದ ಹಾಗೂ ಮುಕ್ರಂಪಾಡಿ-ಮೊಟ್ಟೆತ್ತಡ್ಕ ತಿರುವಿನಿಂದ ಮೊಟ್ಟೆತ್ತಡ್ಕ ಜಂಕ್ಷನ್‌ವರೆಗೆ ಕೇಸರಿ ತೋರಣಗಳಿಂದ, ಕೇಸರಿ ಬಾವುಟಗಳಿಂದ ಹಾಗೂ ಲೈಟ್ಸ್‌ಗಳಿಂದ ಅಲಂಕೃತಗೊಳಿಸಲಾಗಿದೆ. ಈ ಸಂದರ್ಭದಲ್ಲಿ ದಿ.ಕೆ ಮೋಹನ್ ರೈ ಮಿಶನ್‌ಮೂಲೆರವರ ಮತ್ತೋರ್ವ ಪುತ್ರ ಸತೀಶ್ ರೈ ಮಿಶನ್‌ಮೂಲೆ, ದೇವಸ್ಥಾನದ ಅಧ್ಯಕ್ಷ ರಾಮ ಶೆಟ್ಟಿ, ಕಾರ್ಯದರ್ಶಿ ಕೆ.ಬಿ ಶೇಖರ, ಜೊತೆ ಕಾರ್ಯದರ್ಶಿಗಳಾದ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ, ಕೋಶಾಧಿಕಾರಿ ಮೋಹನ್ ಕುಮಾರ್ ಡಿ, ಲೆಕ್ಕಪರಿಶೋಧಕ ಬಿ.ವಿಶ್ವನಾಥ ರೈ ಮಿಶನ್‌ಮೂಲೆ, ಉಪಾಧ್ಯಕ್ಷರುಗಳಾದ ಸಂತೋಷ್ ಕುಮಾರ್ ಕೆ, ಸತೀಶ್ ಎಂ. ಸಹಿತ ನೂರಾರು ಭಕ್ತಾಭಿಮಾನಿಗಳು ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here