ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಕ್ರೀಡಾಕೂಟ – ರಾಮಕುಂಜ ಆ.ಮಾ.ಶಾಲಾ 4 ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

0

ರಾಮಕುಂಜ: ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಕ್ರೀಡಾಕೂಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರತಿನಿಧಿಸಿದ ಬಾಲವರ್ಗ ಹಾಗೂ ಕಿಶೋರ ವರ್ಗದ ಬಾಲಕರು ಮತ್ತು ಬಾಲಕಿಯರು ಭಾಗವಹಿಸಿ ಬಾಲವರ್ಗ (14 ವರ್ಷದ ಒಳಗಿನ) ವಿಭಾಗದಲ್ಲಿ 4 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಕಿಶೋರ ವರ್ಗ (17 ವರ್ಷದ ಒಳಗಿನ) ವಿಭಾಗದಲ್ಲಿ 5 ಪ್ರಥಮ ಹಾಗೂ 1 ತೃತೀಯ ಸ್ಥಾನವನ್ನು ಪಡೆದು ಅ.23 ಮತ್ತು 24ರಂದು ಮಧ್ಯಪ್ರದೇಶದ ಸಾತ್ನದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯಾ ಪಿ ಎನ್ ತರಬೇತಿ ನೀಡಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here