ರಾಮಕುಂಜ: ಆಂಧ್ಯ ಪ್ರದೇಶದ ವಿಜಯವಾಡದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಖೋ ಖೋ ಪಂದ್ಯಾಟದ ಬಾಲವರ್ಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಬಾಲವರ್ಗ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ.
ಸಂಸ್ಥೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಆಕಾಶ್ ಗೌಡ, ಮಯೂರ್ ಎನ್.ಪಿ, ಅವರು ಹರಿಯಾಣದಲ್ಲಿ ಅ.15 ಮತ್ತು 16ರಂದು ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯಾ ಪಿ.ಎನ್ ತರಬೇತಿ ನೀಡಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.