ಪುತ್ತೂರು:ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
34 ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಕಜೆ ಎಂಬಲ್ಲಿ ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ಪಡೆದ ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ಮಾಡಿದಾಗ ಅಲ್ಲಿದ್ದ ಆರೋಪಿಗಳು ಓಡಿ ಪರಾರಿಯಾಗಿದ್ದರು.
ಆರೋಪಿಗಳ ವಿರುದ್ಧ ಕರ್ನಾಟಕ ಗೋ ಹತ್ಯೆ ನಿಷೇದ ಕಾಯ್ದೆ-2020ರ ಕಲಂ 12 ಮತ್ತು ಕಲಂ 3(5) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ರಫೀಕ್, ಉಬೈದ್, ಅಶ್ರಫ್ ಮತ್ತು ನಿಜಾಮುದ್ದೀನ್ ಎಂಬವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.ಆರೋಪಿಗಳ ಪರವಾಗಿ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ. ವಾದಿಸಿದ್ದರು.