ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರಕ್ಕೆ ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಅ.4ರಂದು ಭೇಟಿ ನೀಡಿ ಶ್ರೀದೇವಿಯ ಆಶಿರ್ವಾದ ಪಡೆದರು.
ಮಂದಿರದ ಅರ್ಚಕ ಹರಿಪ್ರಸನ್ನ ಸರೋಳಿತ್ತಾಯ ದೇವರಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತ, ಹಿಂದೂ ಮುಖಂಡರಾದ ಅರುಣ್‌ಕುಮಾರ್ ಪುತ್ತಿಲ, ಮುರಳೀಕೃಷ್ಣ ಹಸಂತಡ್ಕ, ಭಜನಾ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಉಪಾಧ್ಯಕ್ಷರುಗಳಾದ ಯಶವಂತ ಆಚಾರ್ಯ, ದಯಾನಂದ (ಆದರ್ಶ), ಕೋಶಾಧಿಕಾರಿ ತಾರನಾಥ್ ಹೆಚ್., ಹೊರೆಕಾಣಿಕೆ ಸಂಚಾಲಕ ರಾಜೇಶ್ ಬನ್ನೂರು, ಯುವ ಮೋರ್ಛಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಭಟ್, ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ನಗರ ಮಂಡಲ ಯುವಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೇಗ, ಸುನಿಲ್ ದಡ್ಡ, ರತನ್ ರೈ ಕುಂಬ್ರ, ಯೋಗಾನಂದ ರಾವ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.