ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಪ್ರಾರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಭ್ರಮದ ಚಾಲನೆ

0

ಕಾಣಿಯೂರು: ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಮ್ ಉಡುಪಿ ಶ್ರೀ ಕಾಣಿಯೂರು ರಾಮತೀರ್ಥ ಮಠ, ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದಲ್ಲಿ ಅ 3ರಂದು ಪ್ರಾರಂಭಗೊಂಡಿರುವ ನವರಾತ್ರಿ ಉತ್ಸವವು ಅ.12ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮ, ಭಜನಾ ಕಾರ್ಯಕ್ರಮಗಳಿಗೆ ಅ.3ರಂದು ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರು, ಸಲಹಾ ಸಮಿತಿ ಪ್ರಧಾನ ಕಾರ್ಯದರ್ಶಿ ಆಗಿರುವ ಶ್ರೀನಿಧಿ ಆಚಾರ್ಯ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕೋಶಾಧಿಕಾರಿ ಅಜಿತ್ ಆಚಾರ್ಯ ಸೇರಿದಂತೆ ಸಲಹಾ ಸಮಿತಿ ಮಾರ್ಗದರ್ಶಕರು, ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಊರ, ಪರವೂರ ಭಕ್ತರು ಉಪಸ್ಥಿತರಿದ್ದರು. ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಕುಣಿತಾ ಭಜನೆ ನಡೆಯಲಿದ್ದು, ರಾತ್ರಿ ಮಹಾ ಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ. ಅ.11ರಂದು ಸಂಜೆ ವಾಹನ ಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here