ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಕೌಕ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಕೌಕ್ರಾಡಿ, ನೆಲ್ಯಾಡಿ ಪೇಟೆಯ ರಸ್ತೆ ಬದಿ ಸ್ವಚ್ಛತೆ ಮಾಡಿದರು.


ಕೌಕ್ರಾಡಿ ಗ್ರಾ.ಪಂ.ಅಧಕ್ಷ ಲೋಕೇಶ್ ಬಾಣಜಾಲು, ಕಾರ್ಯದರ್ಶಿ ದೇವಿಕಾ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ವಲಯ ಮೇಲ್ವಿಚಾರಕ ಆನಂದ ಡಿ.ಬಿ, ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ಮತ್ತು ೧೭ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here