ನೆಲ್ಯಾಡಿ: ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜು ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಅ.3ರಂದು ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜು ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಉದ್ಘಾಟಿಸಿ ಶುಭಹಾರೈಸಿದರು. ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ವಿಶ್ವನಾಥ.ರೈ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ದೇಶದ ಭವಿಷ್ಯ ರೂಪಿಸುವಲ್ಲಿ ನಾವೆಲ್ಲ ಬದ್ಧರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ವಹಿಸಿದ್ದರು.
ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ಧರ್ಮಗುರು ರೆ.ಫಾ.ಶಾಜಿ ಮ್ಯಾತ್ಯು, ಕೊಕ್ಕಡ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೀನಾ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ದಾಮೋದರ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್ಎಸ್ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಬಿರಾಧಿಕಾರಿ ಉಪನ್ಯಾಸಕ ಮಧು ಎ.ಜೆ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ ಪಿ.ಬಿ ವಂದಿಸಿದರು. ಶಿಬಿರಾಧಿಕಾರಿ ಉಪನ್ಯಾಸಕ ವಿಶ್ವನಾಥ್ ಶೆಟ್ಟಿ ಕೆ ಕಾರ್ಯಕ್ರಮ ನಿರೂಪಿಸಿದರು.