ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ವಿವೇಕಾನಂದ ಕಾಲೇಜಿನ ನಾರಾಯಣ ಕುಂಬ್ರ ಆಯ್ಕೆ

0

ಪುತ್ತೂರು: ಮಡಿಕೇರಿ ನಗರ ದಸರಾ ಸಮಿತಿ ಮತ್ತು ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ನಡೆಯುವ ಬಹುಭಾಷಾ ಕವಿಗೋಷ್ಠಿ ಅಕ್ಟೋಬರ್ 9ರಂದು ಮಡಿಕೇರಿ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಹಿರಿಯ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಬಹುಭಾಷಾ ಕವಿಗೋಷ್ಠಿಗೆ ವಿವೇಕಾನಂದ ಕಾಲೇಜಿನ ನಾರಾಯಣ ಕುಂಬ್ರ ಆಯ್ಕೆಯಾಗಿದ್ದಾರೆ ಎಂದು ಮಡಿಕೇರಿ ದಸರಾ ಕವಿಗೋಷ್ಠಿ ಸಮಿತಿಯ ಅಧ್ಯಕ್ಷ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾರಾಯಣ ಕುಂಬ್ರರವರು ಪುತ್ತೂರು ವಿವೇಕಾನಂದ ಕಾಲೇಜಿನ ಲ್ಯಾಬ್ ಸಹಾಯಕರಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾಗಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಕಾರ್ಯಕ್ರಮ ಸಂಯೋಜಕರಾಗಿ ತಮ್ಮ ಸಾಹಿತ್ಯ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here