ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್ ನ ಪಂಡಿತ್ ದೀನ್ ದಯಾಳ್ ತರಂತಾಲ್ ಈಜು ಕೊಳದಲ್ಲಿ ನಡೆದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಬಾಲವನದ ಅಕ್ವಾಟಿಕ್ ಕ್ಲಬ್ ಲಿಖಿತ್ ರಾಮಚಂದ್ರ ಒಟ್ಟು ಐದು ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಸ್ಪರ್ಧೆಯಲ್ಲಿ 200 ಮೀ, 100 ಮೀ, 50 ಮೀ ಬ್ರೆಸ್ಟ್ ಸ್ಟ್ರೊಕ್ ನಲ್ಲಿ ಮತ್ತು 4×100 ಮೆಡ್ಲೆಯ್ ರಿಲೇ, 4×100 ರಿಲೇ ಫ್ರೀ ಸ್ಟೈಲ್ ನಲ್ಲಿ ಒಟ್ಟು 5 ಚಿನ್ನದ ಪದಕವನ್ನು ಪಡೆದುಕೊಂಡು ಗುಜರಾತ್ ನ ರಾಜಕೋಟ್ ನಲ್ಲಿ ಸ್ಕೂಲ್ ಗೇಮ್ಸ್ ಪೆಡರೇಶನ್ ಆಫ್ ಇಂಡಿಯಾ ವತಿಯಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ 8ನೇ ತರಗತಿ ವಿದ್ಯಾರ್ಥಿಯಾದ ಲಿಖಿತ್ ರಾಮಚಂದ್ರ ಪುತ್ತೂರಿನ ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ ನ ಖ್ಯಾತ ಈಜು ತರಬೇತಿದಾರರಾದ ಪಾರ್ಥ ವಾರಣಾಸಿ, ನಿರೂಪ್ ಕೋಟ್ಯಾನ್, ರೋಹಿತ್ ಮತ್ತು ದೀಕ್ಷಿತ್ ಇವರಿಂದ ಸುಮಾರು 8ವರ್ಷಗಳಿಂದ ತರಬೇತಿ ಪಡೆಯುತ್ತಿದ್ದಾರೆ.
ಇವರು ಪುತ್ತೂರು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಮತ್ತು ದರ್ಬೆ ದೀಪಾ ಬ್ಯೂಟಿ ಪಾರ್ಲರ್ ಮಾಲಕಿ ದೀಪ ಇವರ ಸುಪುತ್ರ.