ಕಾಣಿಯೂರು ಪ್ರಗತಿಯ ಮೋನಿಶ್ ತಂಟೆಪ್ಪಾಡಿ, ಶ್ರೀಮಾ ಕೆ ಎಚ್ ಯೋಗಾಸನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕರ ಯೋಗಾಸನ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಮೋನಿಶ್ ತಂಟೆಪ್ಪಾಡಿ(8ನೇ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ಗೌಡ ಮತ್ತು ದಯಾಮಣಿ ದಂಪತಿಗಳ ಪುತ್ರ.


ಹಾಗೆಯೇ 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀಮಾ ಕೆ ಎಚ್ (8ನೇ) ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಮತ್ತು ಸುಜಿತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ತರಬೇತಿ ನೀಡಿರುತ್ತಾರೆ. ವಿಜೇತರನ್ನು ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ, ಮಾದೋಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಸಂಸ್ಥೆ ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here