ಪುತ್ತೂರು ಶಾರದೋತ್ಸವ: ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವದ 4ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಅ.6ರಂದು ಸಂಜೆ ನಡೆಯಿತು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದ ಅಧ್ಯಕ್ಷ ಸುಧೀರ್ ಕಲ್ಲಾರೆ, ಸದಸ್ಯ ಪದ್ಮನಾಭ ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಯಕ್ಷಶ್ರೀ ಹವ್ಯಾಸಿ ಬಳಗದ ಮುಖ್ಯಸ್ಥೆ ವೀಣಾ ನಾಗೇಶ್ ತಂತ್ರಿ, ನಿತ್ಯಕರಸೇವಕರ ತಂಡದ ಸದಸ್ಯರು ಉಪಸ್ಥಿತರಿದ್ದರು. ಗಿರೀಶ್ ಸ್ವಾಗತಿಸಿ, ಮಂದಿರದ ಕಾರ್ಯದರ್ಶಿ ಜಯಂತ್ ಉರ್ಲಾಂಡಿ ವಂದಿಸಿದರು.


ಸಂಜೆ ಖುಷಿ ಅನಿಲ್ ದೇವಾಡಿಗ ಉರ್ಲಾಂಡಿ ಇವರಿಂದ ಸುಗಮಸಂಗೀತ, ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ‘ಶ್ರೀದೇವಿ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ನಡೆಯಿತು.

LEAVE A REPLY

Please enter your comment!
Please enter your name here