ಮಂಗಳೂರು: ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ನೇಮಕಗೊಂಡಿದ್ದಾರೆ.
ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ. ನೂತನ ಸದಸ್ಯರಾಗಿ ನೇಮಕಗೊಂಡಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ. ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಅ.7ರಂದು ನಡೆಯಲಿದೆ ಎಂದು ತಿಳಿದುಬಂದಿದೆ.