ಶಾಂತಾ ಪುತ್ತೂರುರವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ

0

ಪುತ್ತೂರು: ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸಾಂಸ್ಕೃತಿಕ ಘಟಕ, ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ ಮತ್ತು ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸಹಯೋಗದಲ್ಲಿ ಪಾಂಗೋಡು ಶ್ರೀದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾಂಬಾ ವೇದಿಕೆಯಲ್ಲಿ ಅ.6ರಂದು ಕಾಸರಗೋಡು ದಸರಾ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಇದರ ಅಂಗವಾಗಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ ಸಮಿತಿಯಿಂದ ಬೊಳುವಾರು ನಿವಾಸಿ, ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ-2024’ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಹಿರಿಯ ಸಾಹಿತಿ ವಿ. ಬಿ. ಕುಳಮರ್ವ, ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್,ಅಡೂರು ಶಿವಗಿರಿ ಸಾಹಿತ್ಯ ವೇದಿಕೆ ಅಧ್ಯಕ್ಷ ವಿರಾಜ್ ಅಡೂರು, ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಲಲಿತಾ ಲಕ್ಷ್ಮೀ ಕುಳಮರ್ವ ,ವಿಜ್ಡಮ್ ನೆಟ್ವರ್ಕ್ ನಿರ್ವಾಹಕ ಪ್ರಕಾಶ್ಚಂದ್ರ,ಕೆ.ಪಿ, ಬಿ. ಇ.ಎಂ.ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಾಜೇಶ್ಚಂದ್ರ, ಕೆ.ಪಿ
ವಿಜ್ಡ್ಂ ಸಂಸ್ಥೆಯ ಸಿ.ಇ.ಒ.ಅಭಿಲಾಷ್ ಕ್ಷತ್ರಿಯ, ಸಂಧ್ಯಾರಾಣಿ ಟೀಚರ್,ರಾಜೇಶ್ ಅಣಂಗೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here