ರಾಜ್ಯ ದಸರಾ ಕ್ರೀಡಾಕೂಟ: ಉಪ್ಪಿನಂಗಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

puttur: ಕಳೆದ ಅಕ್ಟೋಬರ್ 3 ರಿಂದ 6 ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿರುತ್ತಾರೆ.


ಮೈಸೂರು ವಿಭಾಗವನ್ನು ಪ್ರತಿನಿಧಿಸಲು ಆಯ್ಕೆಯಾದ ಉಪ್ಪಿನಂಗಡಿ ಕಾಲೇಜಿನ ವಿದ್ಯಾರ್ಥಿಗಳಾದ ಚರಣ್, ಮಹಮ್ಮದ್ ಫಾರಾನ್ , ಲಿಖಿತ ಹಾಗೂ ಧನುಷ ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳು ಈ ಹಿಂದೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಮೈಸೂರು ವಿಭಾಗ ದಸರಾ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು , ಉಪನ್ಯಾಸಕರು,ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರು ಹಾಗೂ ಸದಸ್ಯರುಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here