ನೆಲ್ಯಾಡಿ: ಜೀರ್ಣೋದ್ಧಾರಗೊಳ್ಳುತ್ತಿರುವ ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅ.6ರಂದು ನಂದಿಯನ್ನು ವೈಭವದ ಶೋಭಾಯಾತ್ರೆ ಮೂಲಕ ದೇವಸ್ಥಾನಕ್ಕೆ ತಂದು ಸಮರ್ಪಣೆ ಮಾಡಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣಪ್ರಸಾದ್ ಉಡುಪ ಅವರ ಪೌರೋಹಿತ್ಯದಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆಯಲ್ಲಿ ಪೆರಿಯಡ್ಕದಿಂದ ಪೊರೊಳಿ, ಗುಂಪಲಕೋಡಿ, ಎಂಜಿರಡ್ಕ, ವಳಾಲು, ಬೆದ್ರೋಡಿ, ನೀರಕಟ್ಟೆ, ಕಾಂಚನ ಕ್ರಾಸ್, ಕಾಂಚನ, ಮಂಜಿಪಳ್ಳ ಮಾರ್ಗವಾಗಿ ದೇವಸ್ಥಾನಕ್ಕೆ ತರಲಾಯಿತು. ಬಳಿಕ ದೇವಸ್ಥಾನದಲ್ಲಿ ಮೃತ್ಯಂಜಯ ಹೋಮ ಪೂರ್ಣಾಹುತಿ, ಮಧ್ಯಾಹ್ನ ನಂದಿ ಸಮರ್ಪಣೆ ಪ್ರಯುಕ್ತ ಮುಷ್ಠಿ ಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ತೀರ್ಥಪ್ರಸಾದ ವಿತರಣೆ, ಅನ್ನದಾನ ನಡೆಯಿತು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವೇಣುಗೋಪಾಲ ನಾಯಕ್ ಕುಳ್ಳಾಜೆ ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಬೈಲುವಾರು ಸಮಿತಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.