ಮೊಟ್ಟೆತ್ತಡ್ಕ ಮಿಶನ್‌ಮೂಲೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ – ʼಮೈತಿದಿʼ ನಾಟಕ ಪ್ರದರ್ಶನ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುತ್ತಿರುವ ಸಾರ್ವಜನಿಕ ನವರಾತ್ರಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ಅ.6 ರಂದು ಮುಕ್ರಂಪಾಡಿ ಆನಂದಾಶ್ರಮ ಅಂಗನವಾಡಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಮಹಾಪೂಜೆ ಜರಗಿತು.

ಅ.7 ರಂದು ರಾತ್ರಿ ಐಕ್ಯ ಕಲಾ-ಸೇವಾ ಟ್ರಸ್ಟ್ ಪುತ್ತೂರು ಅರ್ಪಿಸುವ ನವಸಂಭ್ರಮ 2024 ಇದರ ಪ್ರಯುಕ್ತ ತುಳು ರಂಗಭೂಮಿಯಲ್ಲಿ ಸಂಚಲನ ಮೂಡಿಸಿದ ವಿಜಯಕುಮಾರ್ ಕೊಡಿಯಾಲ್‌ಬೈಲ್ ರಚಿಸಿ ನಿರ್ದೇಶಿಸಿದ ಕಲಾಸಂಗಮ ಕಲಾವಿದರ ಅಭಿನಯದʼಮೈತಿದಿ' ತುಳು ನಾಟಕ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.ಅ.10 ರಂದು ರಾತ್ರಿ ಮೊಟ್ಟೆತ್ತಡ್ಕ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಮಹಾಪೂಜೆ, ಅ.11ರಂದು ಇಂಚರ ಮ್ಯೂಸಿಕಲ್ ಪುತ್ತೂರು ಇವರಿಂದಸಂಗೀತ ರಸಸಂಜೆ’ ಬಳಿಕ ಮಹಾಪೂಜೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯಕುಮಾರ್ ಕೊಡಿಯಾಲ್‌ಬೈಲ್‌ ಅವರಿಗೆ ಸನ್ಮಾನ..
ಈ ಸಂದರ್ಭದಲ್ಲಿ ಐಕ್ಯ ಕಲಾ-ಸೇವಾ ಟ್ರಸ್ಟ್ ವತಿಯಿಂದ ʼಮೈತಿದಿʼ ನಾಟಕದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸತೀಶ್ ರೈ ಮಿಶನ್‌ಮೂಲೆ, ಅಧ್ಯಕ್ಷ ರಾಮ ಶೆಟ್ಟಿ ಹಾಗೂ ಪದಾಧಿಕಾರಿಗಳು, ಐಕ್ಯ ಕಲಾ-ಸೇವಾ ಟ್ರಸ್ಟ್‌ ನ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here