ಪುತ್ತೂರು: ಪುತ್ತೂರು ಶಾರದೋತ್ಸವ, ನವರಾತ್ರಿ ಉತ್ಸವದ ಅಂಗವಾಗಿ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.10ರಂದು ಬೆಳಿಗ್ಗೆ ಚಂಡಿಕಾಹೋಮ ನಡೆಯಿತು.
ಕೆಮ್ಮಿಂಜೆ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂಡಿಕಾ ಹೋಮ ನಡೆದು ಪ್ರಸಾದ ವಿತರಣೆಯಾಯಿತು.
ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಕೋಶಾಧಿಕಾರಿ ತಾರನಾಥ್ ಹೆಚ್., ಉಪಾಧ್ಯಕ್ಷರಾದ ಯಶವಂತ ಆಚಾರ್ಯ, ಜತೆ ಕಾರ್ಯದರ್ಶಿ ಸುಧೀರ್ ಕಲ್ಲಾರೆ, ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರ ತಂಡದ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.