ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಾರದಾ ಪೂಜೆ ಹಾಗೂ ಆಯುಧ ಪೂಜೆ

0

ಪುತ್ತೂರು: “ಮಾತೆ ಸರಸ್ವತಿ ಜ್ಞಾನವನ್ನು ಪಡೆಯಲು ನಮ್ಮನ್ನು ಪ್ರೇರೇಪಿಸುವವಳು. ವೇದೋಪನಿಷತ್ತುಗಳು ಅದರ ಬಗ್ಗೆ ಹೇಳುತ್ತದೆ. ವಿದ್ಯಾರ್ಥಿಗಳು ಪುಸ್ತಕಗಳನ್ನೋದುವ ಆರೋಗ್ಯಕರ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಹೇಗೆ ತಾವರೆ ಸೂರ್ಯನ ಬೆಳಕಿಗೆ ತೆರೆದುಕೊಂಡು ಅರಳುವುದೋ ಹಾಗೆಯೇ ವಿದ್ಯಾರ್ಥಿಗಳು ಜ್ಞಾನವನ್ನು ಗಳಿಸುತ್ತಾ ಸಮಾಜಮುಖಕ್ಕೆ ಬೆಳಕಾಗುವಂತೆ ಮುಂದುವರಿಯಬೇಕು. ಸರಸ್ವತಿ ಪೂಜೆ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯವೂ ಸರಸ್ವತಿಯ ಉಪಾಸನೆಯಾಗಬೇಕು” ಎಂದು ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ| ಶ್ರೀಶಕುಮಾರ ಎಂ.ಕೆ ಮಾತನಾಡಿದರು.

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಭಾರತೀಯ ಲಲಿತ ಕಲೆಗಳ ಅಧ್ಯಯನ ಕೇಂದ್ರ ಹಾಗೂ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಶಾರದಾ ಪೂಜೆ ಹಾಗೂ ಆಯುಧ ಪೂಜೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಹುಲಿವೇಷಧಾರಿ ರಾಧಾಕೃಷ್ಣ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್, ಪ್ರಾಂಶುಪಾಲ ಪ್ರೊ| ವಿಷ್ಣುಗಣಪತಿ ಭಟ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ಭಾರತೀಯ ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ| ವಿದ್ಯಾ ಎಸ್ ಉಪಸ್ಥಿತರಿದ್ದರು.


ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಖಿಲ್ ಕುಮಾರ್ ಕೆ.ಟಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಶಿಶ್ ಆಳ್ವ ವಂದಿಸಿದರು. ತೃತೀಯ ಪದವಿ ವಿದ್ಯಾರ್ಥಿನಿ ಪ್ರಸಾದಿನಿ ನಿರೂಪಿಸಿದರು. ಕಾರ್ಯಕ್ರಮದ ನಂತರದಲ್ಲಿ ಕಾಲೇಜಿನ ವಿಭಿನ್ನ ವಿಭಾಗಗಳಿಗೆ, ಪ್ರಯೋಗಾಲಯಗಳಿಗೆ ಹಾಗೂ ವಾಹನಗಳಿಗೆ ಪೂಜೆ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here