





ಸಚಿವ ದಿನೇಶ್ ಗುಂಡೂರಾವ್, ಅಭ್ಯರ್ಥಿ ರಾಜು ಪೂಜಾರಿ, ಮಂಜುನಾಥ ಭಂಡಾರಿ, ರಮಾನಾಥ ರೈ, ವಿನಯ ಕುಮಾರ್ ಸೊರಕೆ ಪುತ್ತೂರಿಗೆ
ಪುತ್ತೂರು: ವಿಧಾನ ಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜು ಪೂಜಾರಿಯವರ ಪರ ಮತಯಾಚನೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮುಖಾಮುಖಿ ಸಮಾವೇಶವು ಅ.11ರಂದು ಅಪರಾಹ್ನ 2 ಗಂಟೆಗೆ ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾ ಭವನದಲ್ಲಿ ನಡೆಯಲಿದೆ.


ಶಾಸಕ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ನಡೆಯುವ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮೊಹಮ್ಮದ್, ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕೆಪಿಸಿಸಿ ಸಂಯೋಜಕರು ಕಾವು ಹೇಮನಾಥ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಹಾಗೂ ಕೆಪಿಸಿಸಿ ಸದಸ್ಯರು ಪ್ರಸಾದ್ ಕೌಶಲ್ ಶೆಟ್ಟಿ ಸಹಿತ ಹಲವು ಮಂದಿ ಪಕ್ಷದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಅಭ್ಯರ್ಥಿ ಎಸ್. ರಾಜು ಪೂಜಾರಿಯನ್ನು ಬಹುಮತದಿಂದ ಗೆಲ್ಲಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.















