ಪುತ್ತೂರು:9 ವರ್ಷಗಳ ಹಿಂದೆ ಪಡ್ನೂರು ಗ್ರಾಮದ ಮುರ ರೈಲ್ವೇ ಹಳಿ ಪಕ್ಕ ಪುತ್ತೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದ ಅಕ್ರಮ ಗಾಂಜಾ ಮಾರಾಟ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
31.07.2015ರಂದು, ನಗರ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಮಹೇಶ್ಪ್ರಸಾದ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಮುರ ಎಂಬಲ್ಲಿ ರೈಲ್ವೇ ಹಳಿ ಪಕ್ಕ ಇರುವ ಮೈದಾನದ ಬಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಗಾಂಜಾವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಅಜರುದ್ದೀನ್ ಎಂಬಾತನನ್ನು ಬಂಧಿಸಿ, ಆತನ ವಶದಲ್ಲಿದ್ದ ಗಾಂಜಾ ಪ್ಯಾಕೆಟ್ ಮತ್ತಿತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧಿಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲ ಮಹೇಶ್ ಕಜೆ ವಾದಿಸಿದ್ದರು.